ಬೆಂಗಳೂರು:- ಶೀಘ್ರದಲ್ಲೇ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಬಳಸದ ವಿದ್ಯುತ್ಗೆ ಗ್ರಾಹಕರು ತೆರಿಗೆ ಕಟ್ಟಬೇಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!
ಈ ಸಂಬಂಧ ನಗರದಲ್ಲಿ ಮಾತನಾಡಿದ ವಿಜಯೇಂದ್ರ ಪದಾಧಿಕಾರಿಗಳ ಬಗ್ಗೆ ಮಹತ್ವದ ಸುಳಿವು ನೀಡಿದ್ದಾರೆ. ಅತಿ ಶೀಘ್ರದಲ್ಲೇ ಬಿಜೆಪಿ ರಾಜ್ಯ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಎಲ್ಲ ಜಿಲ್ಲಾಧ್ಯಕ್ಷರ ಅಭಿಪ್ರಾಯ ಸಂಗ್ರಹಿಸಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಈಗಾಗಲೇ ದೇಶಾದ್ಯಂತ 14 ರಾಜ್ಯಗಳಲ್ಲಿ ಮಾತ್ರ ಅಧ್ಯಕ್ಷರನ್ನ ನೇಮಿಸಲಾಗಿದೆ. ಉಳಿದ ರಾಜ್ಯಗಳಲ್ಲೂ ಆಯ್ಕೆ ಮಾಡಲಿದ್ದಾರೆ. ಇದಾದ ಬಳಿಕ ರಾಷ್ಟ್ರೀಯ ಅಧ್ಯಕ್ಷರನ್ನ ನೇಮಕ ಮಾಡಲಿದ್ದಾರೆ. ಇದು ಬಿಜೆಪಿ ಪಕ್ಷದಲ್ಲಿರುವಂತ ಒಂದು ವಿಧಾನ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆಯಾಗುವ ಸುಳಿವು ನೀಡಿದ್ದಾರೆ.