ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಹೆಸರು ಮತ್ತು ಮೆಂತೇ ಬೀಜಗಳನ್ನು ಆಕ್ಸಿಯಂ-4 ಬಾಹ್ಯಾಕಾಶ ಯೋಜನೆಗಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ರವಾನಿಸಲಾಗಿದೆ. ಬಾಹ್ಯಾಕಾಶದಲ್ಲಿ ಸಲಾಡ್ ಬೀಜಗಳ ಮೊಳಕೆ ಗಗನಯಾತ್ರಿಗಳ ಆಹಾರ ಪೋಷಣೆ ಸಂಶೋಧನೆ ನಿಟ್ಟಿನಲ್ಲಿ ಪರೀಕ್ಷಾರ್ಥವಾಗಿ ರವಾನಿಸಲಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ಮಾಹಿತಿ ನೀಡಿದ್ದಾರೆ.
Indian railways: RAC, ವೇಟಿಂಗ್ ಲಿಸ್ಟ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲ್ವೆ ಇಲಾಖೆಯಿಂದ ಭಾರೀ ಬದಲಾವಣೆ
ಬಾಹ್ಯಾಕಾಶದಲ್ಲಿ ಗಗನಯಾತ್ರಿಗಳು ಈ ಬೀಜಗಳಿಗೆ ನೀರು ಹಾಕುತ್ತಾರೆ. ಎರಡರಿಂದ ನಾಲ್ಕು ದಿನಗಳಲ್ಲಿ ಮೊಳಕೆಯೊಡೆಯುತ್ತವೆ. ಮೊಳಕೆ ಕಾಳುಗಳನ್ನು ಬಾಹ್ಯಾಕಾಶದಲ್ಲಿ ಶೈತ್ಯ ಘಟಕದಲ್ಲಿ ಇಟ್ಟು ನಂತರ ಭೂಮಿಗೆ ಹಿಂದಿರುಗಿಸುತ್ತಾರೆ ಎಂದು ಮಾಹಿತಿ ನೀಡಿರುವ ಅವರು, ಮೊಳಕೆ ಕಾಳುಗಳನ್ನು ವಾಪಸ್ ಭೂಮಿಗೆ ತಂದ ನಂತರ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲಾಗುವುದು.
ಮೊಳಕೆ ಪ್ರಮಾಣ, ಅವುಗಳ ಪೋಷಕಾಂಶ ಗುಣಮಟ್ಟ, ಫೈಟೋ–ಹಾರ್ಮೋನ್ಗಳ ಚಟುವಟಿಕೆ ಹಾಗೂ ಜೀವಸೂತ್ರ (ಟ್ರಾನ್ಸ್ ಕ್ರಿಪ್ಲೋಮ್) ಪರೀಕ್ಷಿಸಿ ವಿಶ್ಲೇಷಿಸಲಾಗುವುದು, ಅಲ್ಲದೇ ಮೊಳಕೆಯ ಮೇಲೆ ಮೈಕ್ರೋಬಿಯಲ್ ಬೆಳವಣಿಗೆ ಅಧ್ಯಯನ ಮಾಡಲಾ ಗುವುದು ಎಂದು ಮಾಹಿತಿ ನೀಡಿದರು. ಈ ಸಂಶೋಧನಯು ಭವಿಷ್ಯದಲ್ಲಿ ಅಂತರಿಕ್ಷ–ಯಾನದಲ್ಲಿ ಭಾರತೀಯರ ಆಹಾರದ ಭಾಗವಾಗಬಲ್ಲ ಆರೋಗ್ಯಕರ ಸಲಾಡ್ ತರಕಾರಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಮೊಳಕೆಯೊಡೆಯುವ ಬೀಜಗಳನ್ನು ಬೆಳೆಸಲು ಕೇವಲ ಕಂಟೇನರ್,
ನೀರು ಇದ್ದರೆ ಸಾಕು. ಮೊಳಕೆ ಕಾಳುಗಳು ಪೋಷಕಾಂಶ ಭರಿತವಾಗಿರುತ್ತವೆ. ಗಗನಯಾನ ಮಿಷನ್ ಭವಿಷ್ಯದ ಯಾತ್ರಿಕರ ಆಹಾರ ಗಮನದಲ್ಲಿಟ್ಟುಕೊಂಡು ಈ ಸಂಶೋಧನೆಗೆ ಹೆಸರು, ಮೆಂತೇ ಬೀಜಗಳ ಮೊಳಕೆ ಅಧ್ಯಯನ ಆಯ್ಕೆ ಮಾಡಿಕೊಳ್ಳಲಾಗಿದೆ‘ ಎಂದು ವಿವರಿಸಿದರು. ಮೆಂತೇ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಎಲುಬಿನ ಆರೋಗ್ಯ ಉತ್ತಮ ಗೊಳಿಸುತ್ತದೆ. ಮೂತ್ರಕೋಶದಲ್ಲಿ ಕಲ್ಲು ರಚನೆಯ ಅಪಾಯವನ್ನು ಕಡಿಮೆ ಮಾಡುತ್ತದೆ. ಹೃದಯಸಂಬಂಧಿ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗಗನಯಾತ್ರಿಗಳ ಆರೋಗ್ಯದ ದೃಷ್ಟಿಯಿಂದ ಸಂಶೋಧನೆಗೆ ಈ ಬೀಜಗಳನ್ನು ಅಯ್ಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.