ಕಲಬುರಗಿ:- ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟಿದ್ದಕ್ಕೆ ಯುವಕನಿಗೆ ಹಲ್ಲೆ ಮಾಡಿರುವಂತಹ ಘಟನೆ ಕಲಬುರ್ಗಿಯಲ್ಲಿ ಜರುಗಿದೆ. ಈ ಮೂಲಕ ನೈತಿಕ ಪೊಲೀಸ್ ಗಿರಿ ಮೆರೆದ 6 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡಿವೈಡರ್ ಗೆ KSRTC ಬಸ್ ಡಿಕ್ಕಿ: ತಪ್ಪಿದ ದುರಂತ.. ಪ್ರಯಾಣಿಕರು ಸೇಫ್!
ಸಲ್ಮಾನ್, ಮೊಹಮ್ಮದ್ ಆದಿಲ್, ಮೊಹಮ್ಮದ್ ರೆಹಾನ್, ಮೊಹಮ್ಮದ್ ಉಜೈರ್, ಮೊಹಮ್ಮದ್ ಫೈಜ್, ಮೊಹಮ್ಮದ್ ಆಸಿಫ್ ಬಂಧಿತರು. ಜೂನ್ 26ರ ಮಧ್ಯಾಹ್ನ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಬೈಲಪ್ಪ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಅನ್ಯಕೋಮಿನ ಯುವತಿಗೆ ತಮ್ಮ ಬೈಕ್ನಲ್ಲಿ ಡ್ರಾಪ್ ನೀಡಿದ್ದಾರೆ. ಈ ವೇಳೆ ಬೈಕ್ ಅಡ್ಡಗಟ್ಟಿ ಕಿಡಿಗೇಡಿಗಳು ತಮ್ಮ ಸಮುದಾಯದ ಯವತಿಯನ್ನು ಬೈಕ್ ಮೇಲೆ ಡ್ರಾಪ್ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ಎಂ.ಬಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಸಂಬಂಧ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.