ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ನೈತಿಕ ಪೊಲೀಸ್ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್!
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತಂಪಾದ ಗಾಳಿ ಬೀಸುತ್ತಿದೆ. ಎಚ್ಎಎಲ್ನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ