ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ನಲ್ಲಿ ಲೀಗ್ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ.
ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ನ ಎರಡನೇ ಆವೃತ್ತಿಯು ಜುಲೈ 18 ರಂದು ಪ್ರಾರಂಭವಾಗಲಿದ್ದು ಯುವರಾಜ್ ಸಿಂಗ್ ಭಾರತ ತಂಡವನ್ನು ಮುನ್ನಡೆಸಲಿದ್ದರೆ ಯೂನಿಸ್ ಖಾನ್ ಪಾಕಿಸ್ತಾನ ಚಾಂಪಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಕಳೆದ ವರ್ಷ ವಿಶ್ವ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಆರಂಭಗೊಂಡಿತ್ತು. ಫೈನಲಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ 5 ವಿಕೆಟ್ ಜಯ ಸಾಧಿಸಿ ಕಪ್ ಗೆದ್ದಿತ್ತು. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಪಾಕಿಸ್ತಾನ, ವೆಸ್ಟ್ ಇಂಡೀಸ್ನ ಹಿರಿಯ ಆಟಗಾರರು ಈ ಟೂರ್ನಿಯಲ್ಲಿ ಭಾಗವಹಿಸುತ್ತಾರೆ.