ನವದೆಹಲಿ:- ಪ್ರಧಾನಿ ನರೇಂದ್ರ ಮೋದಿಯವರು ಮನ್ ಕಿ ಬಾತ್ ನಲ್ಲಿ ಕಲಬುರ್ಗಿ ಜೋಳದ ರೊಟ್ಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಪರಿಶ್ರಮಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಇಲ್ಲಿದೆ ಇನ್ಸೆಕ್ಟ್ ಕಲೆಕ್ಟರ್ ಹುದ್ದೆ.. ಆಸಕ್ತರು ಅಪ್ಲೈ ಮಾಡಿ!
ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಮಹಿಳಾ ಸ್ವಾವಲಂಬನೆ ಭಾರತದ ಅಭಿವೃದ್ಧಿಯ ಹೊಸ ಮಂತ್ರವಾಗಿದೆ. ಮಹಿಳೆ ತಾಯಿ, ಸಹೋದರಿ, ಮಗಳಾಗಿ ಇಡೀ ಸಮಾಜಕ್ಕೆ ಹೊಸ ದಿಕ್ಕು ತೋರಿಸುತ್ತಿದ್ದಾಳೆ. ಕಲಬುರಗಿ ಮಹಿಳೆಯರು ಆತ್ಮನಿರ್ಭರ ಅಭಿಯಾನದಡಿ ಜೋಳದ ರೊಟ್ಟಿಯನ್ನು ಒಂದು ಬ್ರ್ಯಾಂಡ್ ಆಗಿ ರೂಪಿಸಿದ್ದಾರೆ ಎಂದರು.
ಮುಂದುವರಿದು ಮಾತನಾಡಿ, ಕಲಬುರಗಿ ಮಹಿಳೆಯರು ಸ್ವಸಹಾಯ ಸಂಘದ ಮೂಲಕ ಪ್ರತಿನಿತ್ಯ 3 ಸಾವಿರ ರೊಟ್ಟಿ ತಯಾರಿಸುತ್ತಾರೆ. ಈ ರೊಟ್ಟಿ ಕೇವಲ ಗ್ರಾಮಗಳಿಗೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿ ವಿಶೇಷ ಮಳಿಗೆ ತೆರೆದಿದ್ದು, ಆನ್ಲೈನ್ ಮೂಲಕ ಆರ್ಡರ್ ಬರುತ್ತವೆ. ಇದು ಮಹಿಳೆಯರ ಸಾಧನೆಯಾಗಿದೆ ಎಂದರು.