ಹಾಸನ:- ಜಿಲ್ಲೆಯಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದು ತಿಂಗಳಲ್ಲಿ ಹೃದಯಾಘಾತದಿಂದ ಜಿಲ್ಲೆಯಲ್ಲಿ ಸಾಕಷ್ಟು ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆಗಳು ವರದಿಯಾಗಿವೆ.
ಧಾರವಾಡ: ಇಂದು ದೇಶದಲ್ಲಿ ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ: ಸಚಿವ ಲಾಡ್
ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತ ಸಾವು ಪ್ರಕರಣ ಹಿನ್ನೆಡೆ ಹಾಸನ ಜಿಲ್ಲೆಯ ಐದು ತಾಲ್ಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ ಕೇಳಿ ಬಂದಿದೆ. ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು, ಅರಕಲಗೂಡು ಹಾಗು ಚನ್ನರಾಯಪಟ್ಟಣ ತಾಲ್ಲೂಕು ಆಸ್ಪತ್ರೆಯಲ್ಲಿ ಯೋಜನೆ ಜಾರಿಗೆ ಅರೋಗ್ಯ ಇಲಾಖೆ ಮನವಿ ಮಾಡಿದೆ. ಎದೆ ನೋವಿನಿಂದ ಬಳಲಿ ಬಂದವರಿಗೆ ಜಯದೇವ ಆಸ್ಪತ್ರೆ ಸಹಯೋಗ ದ ಚಿಕಿತ್ಸೆಯ ಯೋಜನೆ ರೂಪಿಸಲಾಗಿದೆ.
ಎದೆ ನೋವು ಎಂದು ಬಂದ ರೋಗಿಗಳ ಇಸಿಜಿ ರಿಪೋರ್ಟ್ ಜಯದೇವ ಆಸ್ಪತ್ರೆಗೆ ಅಪ್ಲೋಡ್ ಮಾಡಲಾಗಿದೆ. ವರದಿ ನೋಡಿ ಚಿಕಿತ್ಸೆ ಬಗ್ಗೆ ವೈದ್ಯರು ಮಾರ್ಗದರ್ಶನ ಮಾಡಲಿದ್ದಾರೆ. ಸದ್ಯ ಹಾಸನ ಜಿಲ್ಲೆಯ ಜಿಲ್ಲಾ ಆಸ್ಪತ್ರೆ ,ಹೊಳೆನರಸೀಪುರ ಹಾಗು ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದಲೇ ಸ್ಟೆಮಿ ಯೋಜನೆ ಜಾರಿಯಾಗಿದೆ. ಎಂದು ಜಿಲ್ಲಾ ಅರೋಗ್ಯ ಅಧಿಕಾರಿ ಡಾ ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.
ಹೃದಯಾಘಾತ ಸಾವು ಪ್ರಕರಣ ಹೆಚ್ಚಿದ ಬಳಿಕ ಉಳಿದ ಐದು ತಾಲ್ಲೂಕಿನಲ್ಲೂ ಯೋಜನೆ ಜಾರಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.