ಬೆಂಗಳೂರು:- ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವಂತಹ ಘಟನೆ ಜರುಗಿದೆ. ನಗರದಲ್ಲಿ ಮಹಿಳೆಯ ಭಯಾನಕ ಹತ್ಯೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಸರಣಿ ಹೃದಯಾಘಾತ ಪ್ರಕರಣ: ಹಾಸನದ 5 ತಾಲೂಕಿಗೆ ಸ್ಟೆಮಿ ಯೋಜನೆ ಜಾರಿಗೆ ಪ್ರಸ್ತಾವನೆ!
30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಿನ್ನೆ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾನೆ. ಆಟೋದಲ್ಲಿ ಒಬ್ಬನೇ ವ್ಯಕ್ತಿ ಬಂದಿದ್ದ ಎಂದು ಹೇಳಲಾಗುತ್ತಿದೆ.
ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.