ಬೆಂಗಳೂರು/ಮೈಸೂರು:– ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಪೂಜೆ, ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ ಎಂದು ಹೇಳಿದರು.
ಇನ್ನು ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಬದಲಾವಣೆ ಆಗಲಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಅಶೋಕ್ ಅವರು ಜ್ಯೋತಿಷ್ಯ ಹೇಳಲು ಆರಂಭಿಸಿದ್ದಾರಾ? ಅವರು ಜ್ಯೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ. ನಾನು ಹೋಗಿ ಭವಿಷ್ಯ ಕೇಳುತ್ತೇನೆ ಎಂದು ಛೇಡಿಸಿದರು