ಹಾಸನ: ಜಿಲ್ಲೆಯಲ್ಲಿ ಸಾವಿನ ಸೂತಕದ ಛಾಯೆ ಮುಂದುವರೆದಿದ್ದು, ಹೃದಯಾಘಾತಕ್ಕೆ ಮಹಿಳೆ ಸಾವು ಸಂಭವಿಸಿದೆ. ಹಠಾತ್ ಹೃದಯಾಘಾತಕ್ಕೆ ಮಹಿಳೆ ಲೇಪಾಕ್ಷಿ (50) ಸಾವನ್ನಪ್ಪಿದ ದುರ್ಧೈವಿಯಾಗಿದ್ದು, ಹಾಸನ ಜಿಲ್ಲೆ, ಬೇಲೂರು ಪಟ್ಟಣದ ಜೆಪಿ ನಗರದಲ್ಲಿ ಘಟನೆ ನಡೆದಿದೆ.
ಬೊಜ್ಜಿಗೆ ಮತ್ತೊಂದು ಹೊಸ ಮೆಡಿಸನ್.. ಒಂದೇ ಇಂಜೆಕ್ಷನ್’ನಿಂದ 100 ಕೆಜಿ ತೂಕ ಇಳಿಸಬಹುದು..! ಇದರ ಬೆಲೆ ಎಷ್ಟು?
ಬೆಳಿಗ್ಗೆ ಮನೆಯಲ್ಲಿದ್ದಾಗ ದಿಡೀರ್ ಸುಸ್ತು ಎಂದು ಮಹಿಳೆ ಕುಸಿದು ಬಿದ್ದಿದ್ದಾಳೆ. ಪತಿ ನಾಗರಾಜ್ ಕೂಡಲೇ ಲೇಪಾಕ್ಷಿ ಅವರನ್ನು ಬೇಲೂರಿನ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದರು.
ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಧೃಡಪಡಿಸಿದ್ದಾರೆ. ಇನ್ನೂ ಹಾಸನ ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ ಸಾಕಷ್ಟು ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.