ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬ ಹತ್ತಿರವಾಗುತ್ತಿದೆ. ಇನ್ನೇರಡು ದಿನಗಳು ಮಾತ್ರ ಬಾಕಿ ಇದೆ. 47ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಗಣೇಶ್ ಈ ಬಾರಿ ಅದ್ದೂರಿ ಸಂಭ್ರಮ, ಆಚರಣೆ ಬೇಡ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹೌದು ಈ ಬಗ್ಗೆ ಗಣೇಶ್ ಪೋಸ್ಟ್ ಮಾಡಿದ್ದಾರೆ.
View this post on Instagram
‘ಆತ್ಮೀಯ ಅಭಿಮಾನಿ ಸ್ನೇಹಿತರೆ, ಜುಲೈ 2 ನಾನು ಹುಟ್ಟಿದ ದಿನ. ಸಹಜವಾಗಿ ನನಗದು ನಿಮ್ಮ ಪ್ರೀತಿ ಹಾಗೂ ಅಭಿಮಾನವನ್ನು ಅತ್ಯಂತ ಸಮೀಪದಿಂದ ಕಣ್ಣುಂಬಿಕೊಂಡು ಸಂಭ್ರಮಿಸುವ ದಿನ. ಆದರೆ ಈ ಬಾರಿ ನಾನು ‘ಪಿನಾಕ’ ಹಾಗೂ ‘ಯುವರ್ ಸಿನ್ಸಿಯರ್ಲಿ’ ಚಿತ್ರದ ಹೊರಾಂಗಣ ಚಿತ್ರೀಕರಣಗಳಲ್ಲಿ ಭಾಗವಹಿಸಬೇಕಿದೆ’ ಎಂದು ಗಣೇಶ್ ಪತ್ರ ಆರಂಭಿಸಿದ್ದಾರೆ.
‘ಹೀಗಾಗಿ, ಜುಲೈ2 ರಂದು ನಾನು ನಿಮ್ಮೆಲ್ಲರನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ನಿಮ್ಮನ್ನು ರಂಜಿಸುವುದಕ್ಕಿಂತ ದೊಡ್ಡ ಹಬ್ಬ ನನಗೆ ಮತ್ತೊಂದಿಲ್ಲ. ಆದ ಕಾರಣ ಯಾರೂ ಮನೆಯ ಬಳಿ ಬರದೆ, ಕಷ್ಟದಲ್ಲಿರುವವರಿಗೆ ನೆರವಾಗುವ ಮೂಲಕ ತಾವುಗಳು ಇದ್ದಲ್ಲಿದಂಲೇ ನನಗೆ ಆಶಿಸಿ ಆಶೀರ್ವದಿಸಬೇಕೆಂದು ಈ ಮೂಲಕ ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ