ಬೆಂಗಳೂರು : ರಾಜ್ಯ ಸರ್ಕಾರಕ್ಕೆ ತೀವ್ರ ಸಂಕಷ್ಟ ತಂದೊಡ್ಡಿದ್ದ ವಾಲ್ಮೀಕಿ ನಿಗಮದ 187 ಕೋಟಿ ಹಗರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ಹೈಕೋರ್ಟ್ ಆದೇಶ ನೀಡಿದೆ.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ 187 ಕೋಟಿ ಹಗರಣ ನಡೆದಿದೆ ಎಂದು ಅಂದಿನ ಸಚಿವ ಬಿ.ನಾಗೇಂದ್ರ ವಿರುದ್ಧ ಆರೋಪಿಸಲಾಗಿತ್ತು. ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದಿದ್ದವು. ಇದರಿಂದಾಗಿ ಮಂತ್ರಿಗಿರಿ ಕಳೆದುಕೊಂಡಿದ್ದ ನಾಗೇಂದ್ರ ಜೈಲಿಗೂ ಹೋಗಿ ಬಂದರು. ಅಲ್ಲದೇ ಸಿಎಂ ಸಿದ್ದರಾಮಯ್ಯಗೂ ಈ ಹಗರಣ ಆರೋಪ ಭಾರೀ ಸಂಕಷ್ಟ ತಂದೊಡ್ಡಿತ್ತು.
ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಿಜೆಪಿ ನಾಯಕರಾದ ಯತ್ನಾಳ್, ಲಿಂಬಾವಳಿ ಸೇರಿದಂತೆ ಹಲವು ನಾಯಕರು ಅರ್ಜಿ ಸಲ್ಲಿಸಿದರು. ಹೈಕೋರ್ಟ್ನ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ಪುರಸ್ಕರಿಸಿದ್ದು, ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿ ಆದೇಶ ನೀಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಂತಿದೆ.