ಮೈಸೂರು:– ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಭೇಟಿ ನೀಡಿದರು. ಆಷಾಢ ಮಾಸದ ಹಿನ್ನೆಲೆಯಲ್ಲಿ ನಟ ಶಿವರಾಜ್‌ಕುಮಾರ್ ತಮ್ಮ ಪತ್ನಿ ಜೊತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯ ಸಚಿವ ಸಂಪುಟ ಸಭೆಗೆ ಕ್ಷಣಗಣನೆ: ಬಯಲು ಸೀಮೆಯ ಜಿಲ್ಲೆಗಳಿಗೆ ಸಿಗುತ್ತಾ ಭರಪೂರ ಕೊಡುಗೆ!
ನಿನ್ನೆ ರಾತ್ರಿ ಬೆಟ್ಟಕ್ಕೆ ಆಗಮಿಸಿದ ಶಿವಣ್ಣ ದಂಪತಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಕಳೆದ ಕೆಲ ದಿನಗಳಿಂದ ಶಿವರಾಜ್‌ಕುಮಾರ್ ಮೈಸೂರು ಭಾಗದ ಸುತ್ತಮುತ್ತ ಪ್ರವಾಸ ಕೈಗೊಂಡಿದ್ದಾರೆ. ಮೊನ್ನೆಯಷ್ಟೇ ಪತ್ನಿ ಜೊತೆಗೂಡಿ ಶಿವಣ್ಣ ಕಬಿನಿ ಡ್ಯಾಂಗೆ ಭೇಟಿ ನೀಡಿದ್ದರು. ಈ ವೇಳೆ ಹಾಡಿ ಮಕ್ಕಳ ಜೊತೆ ಫೋಟೊ ಕೂಡ ತೆಗೆಸಿಕೊಂಡಿದ್ದರು.