ಚಿಕ್ಕಬಳ್ಳಾಪುರ : ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ಸರ್ಕಾರ ಪ್ರತಿಯೊಂದು ಉತ್ತರ ಕರ್ನಾಟ, ಹಳೆ ಮೈಸೂರು, ಕರಾವಳಿ ಕರ್ನಾಟಕ ಸೇರಿದಂತೆ ಎಲ್ಲಾ ಭಾಗಗಳಲ್ಲೂ ಕೂಡ ಸಂಪುಟ ಸಭೆ ನಡೆಸಿ, ಆಯಾ ಭಾಗದ ಅಭಿವೃದ್ಧಿಗೆ ಮುಂದಾಗಿದೆ. ಅದರಂತೆ ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ.
ನಂದಿಬೆಟ್ಟದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಸಕಲ ತಯಾರಿ ನಡೆಸಿದೆ. ಇಂದು ಸಚಿವ ಸಂಪುಟ ಸಭೆಯ ಬಳಿಕ ಹಲವು ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಮೊದಲು ಭೋಗ ನಂದೀಶ್ವರ ದೇವಾಲಯ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಆ ಬಳಿಕ ನಂದಿಬೆಟ್ಟದ ನೆಹರು ನಿಲಯದಲ್ಲಿ ಸಭೆ ನಡೆಸಲಿದ್ದಾರೆ.