ಚಿಕ್ಕಬಳ್ಳಾಪುರ: ರೈತರನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರೇ ಕಾರ್ಯಾಚರಣೆ ನಡೆಸಿ, ಸೆರೆಹಿಡಿದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೆರೆ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಲ ದಿನಗಳ ಹಿಂದೆಯೇ ಗುಡಿಬಂಡೆ ತಾಲೂಕಿನ ವರ್ಲಕೊಂಡ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡು ಸ್ಥಳೀಯರ ನಿದ್ದೆಗೆಡಿಸಿತ್ತು. ಇದಾದ ಬಳಿಕ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಬೆಟ್ಟದ ಸುತ್ತಮುತ್ತ ಬೋನನ್ನು ಇಟ್ಟಿದ್ದರು. ಆದರೆ ಚಿರತೆ ಮಾತ್ರ ಬೋನಿಗೆ ಬೀಳದೆ ಗ್ರಾಮಸ್ಥರ ನೆಮ್ಮದಿ ಗೆಡಿಸಿತ್ತು.
ಇನ್ನೂ ಕೆರೆ ಹಳ್ಳಿ ಗ್ರಾಮದ ರಾಮಕೃಷ್ಣ ಎಂಬ ರೈತ ತಮ್ಮ ಜಮೀನಿನಲ್ಲಿ ಒಬ್ಬರೇ ಹಸು ಮೇಯಿಸು ತ್ತಿದ್ದಾಗ ಆಹಾರಕ್ಕಾಗಿ ಹೊಂಚು ಹಾಕಿ ಕುಳಿತಿದ್ದ ಚಿರತೆ ರಾಮಕೃಷ್ಣಪ್ಪ ಮೇಲೆ ದಾಳಿ ಮಾಡಿದೆ. ಈ ವೇಳೆ ರೈತ ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಗ್ರಾಮಕ್ಕೆ ಓಡಿಬಂದು ವಿಷಯ ತಿಳಿಸಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದರಿಂದ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರ್ಲಕೊಂಡ ಬೆಟ್ಟದಲ್ಲಿ ಕಳೆದೊಂದು ವಾರದಿಂದ ಕಾಣಿಸಿಕೊಂಡಿದ್ದ ಚಿರತೆ ಆಹಾರ ಹುಡುಕುತ್ತ ಜನವಸತಿ ಪ್ರದೇಶಗಳತ್ತ ಬಂದಿದೆ. ಇದೇ ವೇಳೆ ರೈತ ರಾಮಕೃಷ್ಣಪ್ಪ ಒಂಟಿಯಾಗಿ ಕಾಣಿಸಿಕೊಂಡಿದ್ದು ಚಿರತೆ ದಾಳಿ ಮಾಡಿದೆ. ಈ ವೇಳೆ ಸಣ್ಣಪುಟ್ಟ ಗಾಯಗಳಿಂದ ಚಿರತೆ ಯಿಂದ ಪಾರಾಗಿ ಊರಿನ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದ್ದಾರೆ. ಇದರಿಂದ ಆಕ್ರೋಶ ಗೊಂಡ ಗ್ರಾಮಸ್ಥರು ದೊಣ್ಣೆ, ಮಚ್ಚುಗಳನ್ನ ಹಿಡಿದು ಚಿರತೆ ಸೆರೆ ಹಿಡಿಯಲು ನಿಂತಿದ್ರು.. ಇನ್ನೂ ಈ ವಿಚಾರ ತಿಳಿಯುತ್ತಿದ್ದಂತೆ ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಮತ್ತು ಎಸಿಎಫ್ ಚಿನ್ನಪ್ಪ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಏನೇ ಆದರೂ ಚಿರತೆಯನ್ನು ನಾವು ಬಿಡೋದಿಲ್ಲ ಎಂದು ಪಟ್ಟು ಹಿಡಿದ ಗ್ರಾಮಸ್ಥರು ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಇನ್ನೂ ವರ್ಲಕೊಂಡ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ಕಾಣಿಸಿಕೊಂಡಿದ್ದ ಚಿರತೆ ರೈತನ ಮೇಲೆ ಅಟ್ಯಾಕ್ ಮಾಡಿ ಸ್ಥಳೀಯ ಗ್ರಾಮಸ್ಥರಿಗೆ ಆತಂಕ ಸೃಷ್ಟಿ ಮಾಡಿತ್ತು. ಆದರೆ ಗ್ರಾಮಸ್ಥರೇ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಂತಾಗಿದೆ.