ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಗಾಳಿ ಮಳೆಯಾಗುತ್ತಿದ್ದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ನದಿಗಳು ಶಾಂತವಾಗಿ ಹರಿಯತೊಡಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾಗಿದ್ದು ನದಿಗಳ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ.
ಶಾಲಾ ಕಾಲೇಜುಗಳು ಬಿಡುವ ಸಮಯದಲ್ಲಿ ಭಾರಿಗಾಳಿ ಮಳೆಯಾಗಿದ್ದು, ವಿದ್ಯಾರ್ಥಿಗಳು ಮಳೆಗೆ ಪರದಾಡಿದ ದೃಶ್ಯ ಕಂಡು ಬಂತು. ಇನ್ನು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.