ಹುಬ್ಬಳ್ಳಿ : ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲೂಕಿನ ರೈತರಿಗೆ ರಸಗೊಬ್ಬರಗಳ ಪೂರೈಕೆ ಕುರಿತು ನಿಗಾವಹಿಸಲು ಜಾರಿದಳ ತಂಡಗಳನ್ನು ರಚಿಸಲಾಗಿದ್ದು, ಅದರಂತೆ ಇಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ.ಬಿ.ಮಜ್ಜಗಿ ಅವರ ಅಧ್ಯಕ್ಷತೆಯಲ್ಲಿ ತಾಲೂಕಿನ ಶಿರಗುಪ್ಪಿ ಹಾಗೂ ಛಬ್ಬಿ ಹೋಬಳಿ ವ್ಯಾಪ್ತಿಯ ವಿವಿಧ ರಸಗೊಬ್ಬರ ಮಾರಾಟ ಮಳಿಗೆಗಳನ್ನು ತಪಾಸಣೆ ಮಾಡಲಾಯಿತು.
ರೈತರಿಂದ ಪಹಣಿ, ಆಧಾರ ಕಾರ್ಡ ಪ್ರತಿ ಪಡೆದು ರಸಗೊಬ್ಬರಗಳನ್ನು ವಿತರಿಸಲು ತಹಶೀಲ್ದಾರರು ಕಟ್ಟುನಿಟ್ಟಿನ ಸೂಚನೆ ನೀಡಿದರು. ರಸಗೊಬ್ಬರ ಮಾರಾಟಗಾರರಿಗೆ ರೈತರಿಗೆ ರಸಗೊಬ್ಬರ ವಿತರಿಸುವಾಗ ಕಡ್ಡಾಯವಾಗಿ ರಸೀದಿ ನೀಡಬೇಕಾಗುತ್ತದೆ. ಎಲ್ಲರಿಗೂ ಕಾಣುವ ಹಾಗೆ ದರಪಟ್ಟಿ ಹಾಗೂ ದಾಸ್ತಾನು ವಿವರಗಳನ್ನು ಪ್ರದರ್ಶಿಸಬೇಕು. ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆಯುವಂತಿಲ್ಲ. ಒತ್ತಾಯಪೂರ್ವಕವಾಗಿ ಲಿಂಕ್ ನೀಡುವಂತಿಲ್ಲ ಹಾಗೂ ಯಾವುದೇ ಲೋಪಗಳು ಕಂಡುಬAದಲ್ಲಿ ಅಂತಹ ಮಾರಾಟಗಾಗರರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದೆಂದು ತಹಶೀಲ್ದಾರರು ತಿಳಿಸಿದರು.
ಈ ಸಂಧರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಾದ ಮಂಜುಳಾ ತೆಂಬದ, ಕೃಷಿ ಅಧಿಕಾರಿಗಳಾದ ಕೆ.ಬಿ. ನದಾಫ, ಮಂಜುಳಾ ದೇವಲಾಪೂರ, ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಗಳಾದ ಶ್ರೀಶೈಲ ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಅಜೀತಕುಮಾರ ಮಾಶಾಲ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.