ಗದಗ :ರಾಜ್ಯ ಸರ್ಕಾರದ ಕಳೆದ ಎರಡು ವರ್ಷಗಳ ಸಾಧನೆ ಬಿಂಬಿಸುವ ಹಿನ್ನಲೆಯಲ್ಲಿ ಮೂರು ದಿನಗಳ ವಸ್ತು ಪ್ರದರ್ಶನವನ್ನು ಗದಗನಲ್ಲಿ ವಾರ್ತಾ ಮತ್ತು ಸಂಪರ್ಕ ಇಲಾಖೆ ಆಯೋಜಿಸಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿಂದು, ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಜಿಲ್ಲಾದ್ಯಕ್ಷ ಬಿ ಬಿ ಅಸೂಟಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ್ರು.
ಇನ್ನು ಕಾರ್ಯಕ್ರಮದಲ್ಲಿ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಎಸ್, ರೋಣ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅದ್ಯಕ್ಷ ಮಿಥುನ್ ಪಾಟೀಲ್, ಗದಗ ತಾಲೂಕಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಮಂದಾಲಿ ಸೇರಿದಂತೆ ಯುವ ಕಾಂಗ್ರೇಸ್ ನ ಜಿಲ್ಲಾದ್ಯಕ್ಷ ಕೃಷ್ಟಗೌಡ ಪಾಟೀಲ್ ಭಾಗಿಯಾಗಿದ್ರು. ಇನ್ನು ಮೂರು ದಿನಗಳ ಕಾಲ ನಡೆಯಲಿರೊ ವಸ್ತು ಪ್ರದರ್ಶನದಲ್ಲಿ, ನಾಡಿನ ಜನರ ಬದುಕು ಬೆಳಗಿಸಿದ ಗ್ಯಾರಂಟಿ ಯೋಜನೆಗಳ ಸಮಗ್ರ ಮಾಹಿತಿ ಹಾಗೂ ಯಶೋಗಾಥೆಯನ್ನೊಳಗೊಂಡಂತೆ ಅನಾವರಣಗೊಳಿಸಲಾಗಿತ್ತು.
ಅಭಿವೃದ್ದಿಯ ಸಂಕಲ್ಪದ 2 ವರ್ಷಗಳ ಸಾಧನಾ ಸಂಭ್ರಮದ ಪುಸ್ತಕವನ್ನು, ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಪಡೆದುಕೊಳ್ಳುವಂತೆ ಬಿಂಬಿಸುವ ಸೆಲ್ಪಿಯ ಸ್ತಬ್ಧ ಚಿತ್ರ ಮಾತ್ರ ಬಸ್ ನಿಲ್ದಾಣದ ಪ್ರಯಾಣಿಕರನ್ನು ಸೆಳೆಯುತ್ತಿತ್ತು. ಇನ್ನು ಗದಗ ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯ ಕೃಷ್ಣಗೌಡ ಮಾತನಾಡಿ, ಸರ್ಕಾರದ 2 ವರ್ಷದ ಸಾಧನೆ ಆಚರಣೆ ರಾಜ್ಯಾದ್ಯಂತ ಸಂತೋಷದಿಂದ ಆಚರಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆ ಮೂಲಕ ಸಾಮಾನ್ಯ ಜನರಿಗೆ ಸ್ವಾಭಿಮಾನದ ಬದುಕನ್ನು ಕಟ್ಟುವಲ್ಲಿ ಯಶಸ್ವಿಯಾಗಿದ್ದೆವೆ. ಜೊತೆಗೆ ಸಮ ಸಮಾಜ ನಿರ್ಮಾಣದ ಜೊತೆಗೆ ಆರ್ಥಿಕವಾಗಿ ಸಮಾನತೆಗೆ ಸಹಕಾರಿಯಾಗಿದೆ ಎಂದು ಹೇಳಿದ್ರು.