ಕಾರವಾರ:- ಕರ್ನಾಟಕದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಹಲವೆಡೆ ಧಾರಕಾರ ಮಳೆ ಆಗುತ್ತಿದೆ. ಅದರಂತೆ ಮಲೆನಾಡು ಭಾಗದಲ್ಲಿ ಧಾರಕಾರ ಮಳೆ ಆಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಸೋಲಾರ್ ಕಂಪನಿಗೆ ಜಮೀನು ಕೊಟ್ಟು ರೈತರನ್ನ ವಕ್ಕಲೆಬ್ಬಿಸಬೇಡಿ: ತಹಸೀಲ್ದಾರ್, ಡಿಸಿಗೆ ಮಾಜಿ ಸಚಿವರ ವಾರ್ನಿಂಗ್!
ಧಾರಕಾರ ಮಳೆ ಮುಂದುವರಿದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉತ್ತರ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆಯಾ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲೆಯಲ್ಲಿ ರಜೆ ಘೋಷಣೆ:
ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಎರಡು ತಾಲೂಕುಗಳಿಗೆ ರಜೆ ಘೋಷಣೆ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ನೀಡಿದ್ದಾರೆ.