ಮಂಡ್ಯ : ಕಾವೇರಿ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಅಪರಿಚಿತ ಮಹಿಳೆಯನ್ನು ರಕ್ಷಣೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಬಳಿ ನಡೆದಿದೆ.
ಮಹಿಳೆಯೊಬ್ಬರು ನದಿಯ ಮಧ್ಯೆಯ ಸಿಲುಕಿ ಸಹಾಯಕ್ಕೆ ಅಂಗಲಾಚಿದ್ದಾರೆ. ಮಹಿಳೆಯ ಕಿರುಚಾಟ ಕೇಳಿಸಿಕೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ಶಾಮಕ ದಳದೊಂದಿಗೆ ಸ್ಥಳಕ್ಕೆ ಬಂದ ಪೊಲೀಸರು, ಪ್ರವಾಹದ ತುಂಬಿ ಹರಿಯುತ್ತಿದ್ದ ಕಾವೇರಿ ನದಿಯಲ್ಲಿ ಕಾರ್ಯಾಚರಣೆ ನಡೆಸಿ, ಮಹಿಳೆಯನ್ನು ರಕ್ಷಿಸಿದ್ದಾರೆ.
ನದಿ ಮಧ್ಯೆ ಇದ್ದ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಯಲ್ಲಿ ಮಹಿಳೆಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.