Close Menu
Ain Live News
    Facebook X (Twitter) Instagram YouTube
    Friday, July 4
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಿ: ತುಷಾರ್ ಗಿರಿನಾಥ್

    By Author AINJuly 4, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ತ್ಯಾಜ್ಯ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ನಡೆಸಲು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಅಧ್ಯಕ್ಷರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಯಮಿತ(ಬಿ.ಎಸ್.ಡಬ್ಲ್ಯೂ.ಎಂ.ಎಲ್), ಸಿ40 ನಗರಗಳ ಸಹಯೋಗ, ಸೆನ್ಸಿಂಗ್ ಲೋಕಲ್ ನೇತೃತ್ವ ಹಾಗೂ ಸಾಹಸ್ ಸಂಸ್ಥೆಯ ಸಹಕಾರದೊಂದಿಗೆ ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

    ನಗರದಲ್ಲಿ ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸುವ ಮೂಲಕ, ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ, ತುರ್ತು ವೈದ್ಯಕೀಯ ಸಹಾಯ ಮಾಡಲು ತಿಳಿಸಿದರು. ತ್ಯಾಜ್ಯ ಕಾರ್ಮಿಕರು ಹಾಗೂ ಮೇಲ್ವಿಚಾರಣೆ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಸಭೆಗಳನ್ನು ನಡೆಸಬೇಕು. ಆ ಮೂಲಕ, ತಕ್ಷಣದ ಸಮಸ್ಯೆಗಳನ್ನು ಪತ್ತೆಹಚ್ಚಿ, ಸಂವಹನಕ್ಕೆ ವೇದಿಕೆ ಒದಗಿಸಿ ಒಟ್ಟಿಗೆ ಸಮಸ್ಯೆ ಪರಿಹಾರ ತಂತ್ರ ರೂಪಿಸಲು ಸೂಚಿಸಿದರು.

    ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾದ ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳನ್ನು ಬಲಪಡಿಸುವುದರ ಜೊತೆಗೆ, ಘಟಕಗಳಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರನ್ನು ಉದ್ಯಮಿಗಳಾಗುವ ವ್ಯವಸ್ಥೆಯನ್ನು ಮಾಡಲಾಗುವುದು. ಜೊತೆಗೆ ಗುರುತಿನ ಚೀಟಿಗಳನ್ನು ಕೂಡಾ ನವೀಕರಣ ಮಾಡಿ ನೀಡಲಾಗುವುದು ಎಂದು ತಿಳಿಸಿದರು.

    ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯಡಿ ತ್ಯಾಜ್ಯ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗಾಗಿ ಹವಾಮಾನ ಕ್ರಿಯೆಯ ಕುರಿತಾಗಿ ತರಬೇತಿ ಹಾಗೂ ಸಂವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅಭಿನಂದನೆಗಳನ್ನು ತಿಳಿಸಿದರು.

    ಮಹಿಳೆಯರಲ್ಲಿ ಹೃದಯಾಘಾತ ಹೆಚ್ಚಾಗಲು ಕಾರಣ ಈ ಮಾತ್ರೆ ; ಈ ಬಗ್ಗೆ ಇರಲಿ ಎಚ್ಚರ..

    5 ವಲಯಗಳಲ್ಲಿ ತರಬೇತಿ:

    ನಗರದ ಪೂರ್ವ, ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯ ಸೇರಿದಂತೆ ಐದು ವಲಯಗಳಲ್ಲಿ 600ಕ್ಕಿಂತ ಹೆಚ್ಚು ಮುಂಚೂಣಿಯ ತ್ಯಾಜ್ಯ ಕಾರ್ಮಿಕರು ಹಾಗೂ ಅಧಿಕಾರಿಗಳಿಗೆ ಮೂರು ಹಂತದ ತರಬೇತಿಗಳನ್ನು ನೀಡಲಾಗಿದೆ. ಮಾರ್ಚ್–ಜೂನ್ 2025ರ ನಡುವೆ ನಡೆದ ಸಾಮಾಜಿಕ ಸಂವಾದದ ಮೂಲಕ 75 ತ್ಯಾಜ್ಯ ಕಾರ್ಮಿಕರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಂಚಿಕೊಂಡು ಪರಿಹಾರ ಮಾರ್ಗಗಳನ್ನು ರೂಪಿಸಿದ್ದಾರೆ.

    ಮುಂಚೂಣಿ ಕಾರ್ಮಿಕರಿಗೆ ತರಬೇತಿ ನೀಡುವ ಉದ್ದೇಶ:

    ಘನ ತ್ಯಾಜ್ಯ ನಿರ್ವಹಣೆಯು ಬೆಂಗಳೂರು ಹವಾಮಾನ ಕ್ರಿಯೆ ಮತ್ತು ಸ್ಥಿತಿಸ್ಥಾಪಕತ್ವ ಯೋಜನೆಯ(BCAP) ಪ್ರಮುಖ ಅಂಶವಾಗಿದೆ. ಈ ಹಿನ್ನೆಲೆಯಲ್ಲಿ ತ್ಯಾಜ್ಯ ವಿಭಾಗದಲ್ಲಿ ಕಾರ್ಯನಿವಹಿಸುತ್ತಿರುವ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್‌ಗಳು, ಲಿಂಕ್ ವರ್ಕರ್ಸ್ಗಳು ಹಾಗೂ ಒಣ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಆಯಾ ವಲಯಮಟ್ಟದಲ್ಲಿ ತರಬೇತಿಗಳನ್ನು ಆಯೋಜಿಸಿ, ಅವರಿಗೆ ತ್ಯಾಜ್ಯ ವಿಲೇವಾರಿ, ಬಲ್ಕ್ ವೇಸ್ಟ್, ತ್ಯಾಜ್ಯದಿಂದ ಆದಾಯ ಗಳಿಸುವ, ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ.

    ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸ್ನೇಹಲ್, ರಮೇಶ್, ದಿಗ್ವಿಜಯ್ ಬೋಡ್ಕೆ, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯಾಚರಣೆ ಅಧಿಕಾರಿ ರಮಾಮಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಬಸವರಾಜ್ ಕಬಾಡೆ, ಮಾರ್ಷಲ್‌ಗಳು, ಲಿಂಕ್ ವರ್ಕರ್ಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ದೇಶದ ಜನಸಾಮಾನ್ಯರ ಏಕೈಕ ಆಶಾಕಿರಣ ಆಮ್ ಆದ್ಮಿ ಪಕ್ಷ: ಆತಿಷಿ ಸಿಂಗ್

    July 4, 2025

    ಕಾನೂನು ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

    July 4, 2025

    ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ರವಿಕುಮಾರ್ ವಿರುದ್ಧ ಸುರೇಶ್ ಗೌಡ ಕಿಡಿ

    July 4, 2025

    PUC, ಡಿಗ್ರಿ ಪಾಸಾಗಿದ್ಯಾ!? ಹಾಗಿದ್ರೆ ಇಲ್ಲಿದೆ ಭರ್ಜರಿ ಉದ್ಯೋಗವಕಾಶ! ಬೇಗ ಸಂದರ್ಶನಕ್ಕೆ ಹಾಜರಾಗಿ

    July 4, 2025

    Video.. ಬೆಂಗಳೂರಲ್ಲಿ ಕಾಲೇಜಿಗೆ ಹೋಗುತ್ತಿದ್ದ ಬಾಲಕನಿಗೆ BMTC ಬಸ್ ಡಿಕ್ಕಿ..! ಮುಂದೇನಾಯ್ತು..?

    July 4, 2025

    ಆಕ್ಷೇಪಾರ್ಹ ಹೇಳಿಕೆ: FIR ದಾಖಲಾಗುತ್ತಿದ್ದಂತೆಯೇ ಹೈಕೋರ್ಟ್ ಮೆಟ್ಟಿಲೇರಿದ ರವಿಕುಮಾರ್..!

    July 4, 2025

    ಕೊಟ್ಟ ಸಾಲ ವಾಪಸ್ಸು ಕೇಳಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ.! ಸಂಬಂಧಿಕರಿಂದಲೇ ಕೊಲೆಗೆ ಸ್ಕೆಚ್

    July 4, 2025

    Bengaluru: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ರೈತ ಹೋರಾಟಗಾರರು..!

    July 4, 2025

    ರವಿಕುಮಾರ್ ವಿವಾದಾತ್ಮಕ ಹೇಳಿಕೆ ವಿಚಾರ: ಬಿ. ವೈ ವಿಜಯೇಂದ್ರ ಹೇಳಿದ್ದೇನು..?

    July 4, 2025

    ಬೆಳ್ಳಂಬೆಳಗ್ಗೆ ಕುಟುಂಬಸ್ಥರೊಟ್ಟಿಗೆ ನಾಡದೇವತೆ ಚಾಮುಂಡಿ ʼದರ್ಶನʼ ಪಡೆದ ಡಿಬಾಸ್!‌

    July 4, 2025

    ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: MLC ರವಿಕುಮಾರ್ ವಿರುದ್ಧ FIR ದಾಖಲು!

    July 4, 2025

    ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 101 ಕೋಟಿ ಬಿಡುಗಡೆ..!

    July 4, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.