ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮದಲ್ಲಿ ಪ್ರಿಯತಮೆಯನ್ನು ತನ್ನಿಂದ ದೂರ ಮಾಡಿದ್ದಕ್ಕೆ ಪ್ರಿಯಕರ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ.
ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!
ಶೇಖರ್ (35 ವರ್ಷ) ವಿಷ ಸೇವಿಸಿದ ಪ್ರಿಯಕರ. ಶೇಖರ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನ ಬಸ್ ಚಾಲಕರಾಗಿದ್ದಾರೆ. ಶೇಖರ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಂಡಿಗಾನಹಳ್ಳಿ ಗ್ರಾಮದ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಪ್ರೇಮಿಗಳು ಮನೆ ಬಿಟ್ಟು ಹೋಗಿ ದೇವಸ್ಥಾನವೊಂದರಲ್ಲಿ ಮದುವೆನೂ ಆಗಿದ್ದರು. ಆದರೆ, ಯುವತಿಯ ಪೊಷಕರು ತಮ್ಮ ಮಗಳು ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಆಗ ಜೋಡಿ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ಬಂದಾಗ ಆಗಬಾರದ ಘಟನೆ ಆಗಿದೆ.
ಠಾಣೆಯಲ್ಲೇ ದಂಪತಿಯನ್ನು ದೂರ ಮಾಡಲು ಯುವತಿಯ ಪೊಷಕರು ಪ್ರಯತ್ನ ಮಾಡಿದ್ದಾರೆ. ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಿದ್ದಾರಂತೆ. ಆದರೂ, ಯುವತಿ ಏನೇ ಆದ್ರು ಶೇಖರ್ ಜೊತೆ ಹೋಗುವುದಾಗಿ ಪಟ್ಟು ಹಿಡಿದಿದ್ದಳಂತೆ.
ಆಗ, ಆಷಾಢ ಮಾಸ ಕಳೆದ ನಂತರ ಇಬ್ಬರಿಗೆ ಕಲ್ಯಾಣ ಮಂಟಪದಲ್ಲಿ ಮರು ಮದುವೆ ಮಾಡುವುದಾಗಿ ನಂಬಿಸಿ ಇಬ್ಬರನ್ನೂ ಯುವತಿ ಪೋಷಕರು ತಮ್ಮ ಕಾರಿನಲ್ಲಿ ಕರೆದುಕೊಂಡು ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಹೊರಟಿದ್ದಾರೆ. ದಾರಿ ಮಧ್ಯೆ ಶೇಖರ್ನನ್ನು ಕಾರಿನಿಂದ ಕೆಳಗೆ ತಳ್ಳಿ, ತಮ್ಮ ಹುಡುಗಿಯನ್ನು ಕರೆದುಕೊಂಡು ಹೋಗಿದ್ದಾರಂತೆ.
ಶುಕ್ರವಾರ ) ಬೆಳಿಗ್ಗೆ ಶೇಖರ್ ತನ್ನ ಪ್ರಿಯತಮೆಯನ್ನು ಭೇಟಿ ಮಾಡಲು ಆಕೆಯ ಮನೆ ಬಳಿ ಹೋಗಿದ್ದಾರೆ. ಆಗ ಆಕೆಯ ಪೋಷಕರು ಬೈಯ್ದು ವಾಪಸ್ ಕಳುಹಿಸಿದ್ದಾರೆ. ಇದರಿಂದ ಮನನೊಂದ ಶೇಖರ್ ವಾಪಸ್ ತನ್ನೂರಿಗೆ ಆಗಮಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.