ಬೆಂಗಳೂರು ಗ್ರಾಮಾಂತರ:- ರಾಜ್ಯದಲ್ಲಿ ಅಸ್ಪೃಷ್ಯತೆ ಆಚರಣೆ ಇನ್ನೂ ಜೀವಂತವಾಗಿಯೇ ಇದೆ. ರಾಜ್ಯದ ಕೆಲವು ಗ್ರಾಮಗಳಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರಾಕರಿಸುವುದು ಮಾತ್ರವಲ್ಲದೆ ಕುಡಿಯುವ ನೀರು, ಅಂಗನವಾಡಿ ಪ್ರವೇಶ ಹಾಗೂ ಪಡಿತರ ಪಡೆಯಲು ಅಡ್ಡಿ ಉಂಟು ಮಾಡುತ್ತಿರುವ ಪ್ರಕರಣಗಳು ವರದಿ ಆಗುತ್ತಲೇ ಇರುತ್ತದೆ.
ಟಮೋಟ ತುಂಬಿಕೊಂಡು ಗುಜರಾತ್ ಗೆ ತೆರಳುತ್ತಿದ್ದ ಲಾರಿ ಪಲ್ಟಿ: 15 ಲಕ್ಷ ಮೌಲ್ಯದ ಹಣ್ಣು ನಜ್ಜುಗುಜ್ಜು
ಅದರಂತೆ ಬೆಂಗಳೂರು ಹೊರವಲಯದಲ್ಲಿಯೂ ಅಸ್ಪೃಶ್ಯತೆ ಇನ್ನೂ ಜೀವಂತ ಇದ್ದು, ದೇವಾಲಯಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ದೊಡ್ಡಬಳ್ಳಾಪುರದ ಗೂಳ್ಯ ಗ್ರಾಮದಲ್ಲಿ ಈ ಅನಿಷ್ಟ ಪದ್ದತಿ ಇನ್ನೂ ಜೀವಂತ ಇದೆ. ಈ ಬಗ್ಗೆ ದೂರು ಬಂದ ಹಿನ್ನಲೆ ಗ್ರಾಮಕ್ಕೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.
ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಮತ್ತು ಡಿವೈಎಸ್ಪಿ ರವಿ ,ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಭೇಟಿ ನೀಡಿ ಗ್ರಾಮದಲ್ಲಿ ಶಾಂತಿ ಸಭೆ ಮಾಡಿದರು. ಗ್ರಾಮದ ಓರ್ವ ಮಹಿಳೆ ಅಬಕಾರಿ ಇಲಾಖೆಗೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಜೊತೆಗೆ ಅನಿಷ್ಟ ಪದ್ದತಿ ಇದೆ ಎಂದು ದೂರು ನೀಡಿದರು.
ಈ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ, ಮತ್ತು ತಾಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ದಲಿತರಿಗೆ ದೇವಾಲಯಕ್ಕೆ ಪ್ರವೇಶ ನೀಡಲು ಅವಕಾಶ ಮಾಡಿಕೊಟ್ಟರು. ಸಭೆಯಲ್ಲಿ ಗ್ರಾಮದ ಮುಖಂಡರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.