ಬೆಳಗಾವಿ:- ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ಹೊತ್ತಿ ಉರಿದ ಘಟನೆ ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣ ಬಳಿ ಜರುಗಿದೆ. ಘಟನೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಓವರ್ ಟೇಕ್ ತಂದ ಆಪತ್ತು: ಸ್ಕಿಡ್ ಆಗಿ ಬೈಕ್ ನಿಂದ ಬಿದ್ದ ಸವಾರ Spot Death!
ಈ ಕಾರು ವಿನಯ ನೂಲಿ ಎಂಬುವವರಿಗೆ ಸೇರಿದ್ದು ಎಂಬ ಮಾಹಿತಿ ಲಭ್ಯವಾಗಿದೆ. ಕಾರು ಸ್ಟಾಪ ಮಾಡಿ ಕೆಳಗಡೆ ಇಳಿಯುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಅವಘಡದಿಂದ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಮಾರ್ಕೆಟ್ ಪಿಎಸ್ಐ ಹುಸೇನ್ ಸೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬೆಳಗಾವಿ ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.