ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ 80ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಡಲಾಗಿದ್ದು, ಕಂಪ್ಲಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ. ಜಿಲ್ಲೆಯ ಕಂಪ್ಲಿ ಪಟ್ಟಣದ ಕೋಟೆ ಪ್ರದೇಶದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಂಪ್ಲಿ ಹಾಗೂ ಗಂಗಾವತಿಗೆ ಸಂಪರ್ಕ ಕಲ್ಪಿಸುವ ಸೇತುವೆಗೆ ಮುಳುಗಡೆಯ ಭೀತಿ ಎದುರಾಗಿದೆ.
ಮಳೆ ಹೆಚ್ಚಾಗುತ್ತಿದ್ದಂತೆ ತುಂಗಭದ್ರಾ ಜಲಾಶಯದ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಕ್ರಸ್ಟ್ ಗೇಟ್ ಗಳು ಮುಕ್ಕಾಗಿವೆ ಎಂಬ ವರದಿಯ ಬೆನ್ನಲ್ಲೇ ತಜ್ಞರು ನೀಡಿದ ಸಲಹೆಯಂತೆ ಈ ಬಾರಿ 80 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹ ಮಾಡಲು ನಿರ್ಧರಿಸಿದ ಕಾರಣದಿಂದ ಜಲಾಶಯದ ಹೊರ ಹರಿವಿನ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಸೇತುವೆಯ ಎರಡರಿಂದ ಮೂರು ಅಡಿಗಳಷ್ಟು ಕೆಳಗಡೆ ನೀರು ಹರಿಯುತ್ತಿದ್ದೂ ಜಲಾಶಯದಿಂದ ಯಾವ ಕ್ಷಣದಲ್ಲಾದರೂ ಹೆಚ್ಚು ನೀರು ಹರಿಬಿಡುವ ಸಾಧ್ಯತೆ ಇದೆ. ಇದರಿಂದಾಗಿ ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಗಂಡಾಂತರ ಎದುರಾಗಿದ್ದು, ಮುಳುಗಡೆ ಭೀತಿಯಲ್ಲಿ ಸೇತುವೆ ಇದೆ. ಜಲ ಗಂಡಾಂತರ ಎದುರಾಗಿದ್ದು, ಮುಳುಗಡೆ ಭೀತಿಯಲ್ಲಿ ಸೇತುವೆ ಇದೆ.
ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆಯಾಗುವುದರಿಂದ ಪ್ರತಿ ಬಾರಿ ಈ ಸೇತುವೆ ಮುಳುಗಡೆಯಾಗುತ್ತದೆ. ಈ ಹಿನ್ನೆಲೆ ಸೇತುವೆ ಮೇಲ್ದರ್ಜೆಗೆ ಏರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸೇತುವೆ ಮುಳುಗಡೆಯಾದರೆ ಜನರು 30 .ಮೀ ಸುತ್ತುವರೆದು ಗಂಗಾವತಿಗೆ ತೆರಳುತ್ತಾರೆ. ಕಂಪ್ಲಿಸೇರಿದಂತೆ ಈ ಭಾಗದ ವಿದ್ಯಾರ್ಥಿಗಳು, ನೌಕರರು, ಕಾರ್ಮಿಕರು ಪ್ರಯಾಣಿಸಿ ಗಂಗಾವತಿ ಸೇರುವ ಸಮಸ್ಯೆ ಎದುರಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಹಾಗೂ ನಿತ್ಯ ಓಡಾಡುವ ಸಾರ್ವಜನಿಕರಿಗೆ ಸಾರಿಗೆ ಬಸ್ ನ ಸಮಸ್ಯೆಯಾಗುವ ಸಾಧ್ಯತೆಯು ಇದೆ.