ಗದಗ : ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಆ್ಯಂಬುಲೆನ್ಸ್ನಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ದಿಂಡೂರ ತಾಂಡಾದಿಂದ ಜಿಮ್ಸ್ ಆಸ್ಪತ್ರೆ ಬರುವ ಮಾರ್ಗ ಮಧ್ಯೆ ಹೆರಿಗೆಯಾಗಿದೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಸಾವಿತ್ರಿ ಲಮಾಣಿ ಅವರನ್ನು108 ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯಲಾಗುತ್ತಿತ್ತು. ಮಾರ್ಗ ಮಧ್ಯೆಯೇ ಹೆರಿಗೆ ನೋವು ಜಾಸ್ತಿಯಾಗಿತ್ತು. ಹೀಗಾಗಿ ಆ್ಯಂಬುಲೆನ್ಸ್ ನಲ್ಲೇ ಸುರಕ್ಷಿತವಾಗಿ ಹೆರಿಗೆ ಮಾಡಿಸಲಾಗಿದ್ದು, ಸಾವಿತ್ರಿ ಲಮಾಣಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 108 ಸಿಬ್ಬಂದಿ ರವಿ ಬಡಿಗೇರ ಹಾಗೂ ಮಹೇಶ ರಾಮಣ್ಣವರ ಅವರಿಗೆ ಸಾರ್ವಕನಿಕರಿಂದ ಮೆಚ್ಚುಗೆ
ಸದ್ಯ ತಾಯಿ ಮತ್ತು ಮಗುವಿನ ಸ್ಥಿತಿ ಆರೋಗ್ಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.