ಬೆಳಗಾವಿ: ಗೋಕಾಕ್‌ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಬಂದೂಕು ಹಿಡಿದು ದರ್ಪ ಮೆರದಿದ್ದು, ಈ ವಿಡಿಯೋ ವೈರಲ್ ಆಗಿದೆ. ಭಾರೀ ಆಕ್ರೋಶದ ಬಳಿಕ ಸಂತೋಷ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ಲಕ್ಷ್ಮೀದೇವಿ ಜಾತ್ರೆಯಲ್ಲಿ ಜಾರಕಿಹೊಳಿ ಪುತ್ರ ಸಂತೋಷ್ ತಮ್ಮ ಬೆಂಬಲಿರಗೊಂದಿಗೆ ಭಾಗವಹಿಸಿದ್ದು, ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇ ವೇಳೆ ಅವರ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಅಲ್ಲದೇ ಪೊಲೀಸರ ಎದುರಲ್ಲೇ ಹೀಗೆ ಸಾರ್ವಜನಿಕವಾಗಿ ಗುಂಡು ಹಾರಿಸಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿದ್ದಾರೆ.