ಬೆಂಗಳೂರು:- ಪ್ರಿಯಾಂಕ ಖರ್ಗೆಗೆ ಅಧಿಕಾರದ ಮದ ಹೆಚ್ಚಾಗಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ BS ಯಡಿಯೂರಪ್ಪ ಕಿಡಿಕಾರಿದರು.
ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ ಮದದಿಂದ ಸಚಿವ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ಅನ್ನು ಬ್ಯಾನ್ ಮಾಡ್ತೀವಿ ಅಂತ ಹೇಳ್ತಿದ್ದಾರೆ. ಮೊದಲು ಪ್ರಿಯಾಂಕ್ ಖರ್ಗೆ ದೇಶದ ಕ್ಷಮೆ ಕೇಳಬೇಕು.
ಪ್ರಿಯಾಂಕ್ ಖರ್ಗೆ ಅವರು ಅಧಿಕಾರದ ಮದದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಎಸ್ಎಸ್ ಬ್ಯಾನ್ ಮಾಡ್ತೀವಿ ಅಂತ ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ಇಡೀ ದೇಶದ ಉದ್ದಗಲಕ್ಕೂ ಪ್ರಧಾನಿ ಮೋದಿ, ನಾನು ಸೇರಿದಂತೆ ಆರ್ಎಸ್ಎಸ್ ಗರಡಿಯಲ್ಲಿ ಬೆಳೆದಿದ್ದೇವೆ. ಮೊದಲು ನೀವು ಅಧಿಕಾರ ಬರುತ್ತೇವೆ ಅನ್ನೋದು ಕನಸಿನ ಮಾತು ಅಂತ ಲೇವಡಿ ಮಾಡಿದ್ದಾರೆ