ಬೆಂಗಳೂರು:- ಜ್ಙಾನಭಾರತಿ ರಿಂಗ್ ರಸ್ತೆಯ ರಾಮಸಂದ್ರ ಬ್ರಿಡ್ಜ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಡಿವೈಡರ್ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಪೀಸ್ ಪೀಸ್ ಆಗಿದೆ.
ಜುಲೈ 5 ರಂದು ಮಧ್ಯಾಹ್ನ 1 ಗಂಟೆಗೆ ಬ್ಯಾಡರಹಳ್ಳಿ ಕಡೆಯಿಂದ ಕೆಂಗೇರಿ ಕಡೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಟೆಂಪೊದಲ್ಲಿ ಇದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಸಂಬಂಧ ಜ್ಙಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.