ಕೋಲಾರ – ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ಅಧ್ಯಕ್ಷರಾಗಿ ಕಾಂಗ್ರೆಸ್ ಶಾಸಕ, ಮಾಲೂರಿನ ಕೆ.ವೈ.ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸತತ ಮೂರನೇ ಬಾರಿ ಅವರು ಈ ಸ್ಥಾನಕ್ಕೇರುತ್ತಿದ್ದಾರೆ. ಕೋಮುಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಂಜೇಗೌಡ ನಾಮಪತ್ರ ಸಲ್ಲಿಸಿದ್ದರು.
ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಕ್ಕೂಟದ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಮಂದಿ ಜಯ ಸಾಧಿಸುವುದರೊಂದಿಗೆ ಕೋಮುಲ್ ‘ಕೈ’ ತೆಕ್ಕೆಗೆ ಜಾರಿತ್ತು.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಮಾಲೂರು ಟೇಕಲ್ ಕ್ಷೇತ್ರದಿಂದ ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದರು. ಜೆಡಿಎಸ್-ಬಿಜೆಪಿ ಮೈತ್ರಿಕೂಟ ನಾಲ್ವರು ನಿರ್ದೇಶಕರು ಮಾತ್ರ ಗೆದ್ದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ನಂಜೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.