ತುಮಕೂರು: ದಾವಣಗೆರೆಯ ಅಪರಾಧ ವಿಭಾಗದ ಪಿಎಸ್‌ಐ ನಾಗರಾಜು ಅವರು ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಘಟನೆ ಇದೀಗ ಬೆಳಕಿಗೆ ಬಂದಿದೆ. 59 ವರ್ಷದ ನಾಗರಾಜು, ತುಮಕೂರು ನಗರದ ದ್ವಾರಕಾ ಲಾಡ್ಜ್ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಅವರು ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೂ ಮುನ್ನ ನಾಗರಾಜು ಡೆತ್ ನೋಟ್ ಬರೆದಿದ್ದು,”ನನ್ನ ಸಾವಿನ ನಂತರ ನನ್ನ ಮಗನಿಗೆ ಸರ್ಕಾರಿ ಕೆಲಸ ಕೊಡಬೇಕು” ಎಂದು ಮನವಿ ಮಾಡಿದ್ದಾರೆ.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಕೌಟುಂಬಿಕ ಕಲಹವೇ ಸಾವಿಗೆ ಕಾರಣ ಎಂದು ಅವರು ಬರೆಯಲಾಗಿದೆ.ಡೆತ್ ನೋಟ್‌ನಲ್ಲಿ ನಾಗರಾಜು ತಮ್ಮ ಮಗಳು ಮತ್ತು ಅಳಿಯನನ್ನು ಶ್ಲಾಘಿಸಿದ್ದು,“ಅಳಿಯ ನನ್ನ ಮಗನಂತಿದ್ದಾರೆ” ಎಂಬಂತ ಭಾವುಕ ಮಾತುಗಳು ಕೂಡ ದಾಖಲಿಸಲಾಗಿದೆ.
ಘಟನೆಯ ಬಳಿಕ ಸ್ಥಳಕ್ಕೆ ಸಿಪಿಐ ಅವಿನಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.PSI ನಾಗರಾಜು ಅವರ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.