ಗದಗ:- ಕರ್ನಾಟಕದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಗದಗ ನಗರದಲ್ಲಿ ಮಾತನಾಡಿದ ಅವರು, ಮುಂಡರಗಿಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಕನಕ ಸಮುದಾಯ ಭವನ ನಿರ್ಮಾಣ ಮಾಡಲಾಗುತ್ತಿದೆ. ಅಲ್ಲದೆ, ಎಲ್ಲಾ ಕ್ಷೇತ್ರಗಳಿಗೆ ಸಿಎಂ ತಲಾ 50 ಕೋಟಿ ರೂ. ಹಾಗೂ ಬೆಂಗಳೂರಿಗೆ 2 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ ಎಂದಿದ್ದಾರೆ.
5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ವತಃ ಸಿಎಂ ಹಾಗೂ ಪಕ್ಷದ ಎಲ್ಲರೂ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಎಷ್ಟು ಅನುದಾನ ಸಿಗುತ್ತಿತ್ತು ಎನ್ನುವದನ್ನು ನೋಡಿ ಹೇಳಿದ್ದಾರೆ. ಬಿಜೆಪಿಗೆ ಹೋಲಿಸಿದರೆ ಅಭಿವೃದ್ಧಿ ಕೆಲಸ ಚೆನ್ನಾಗಿಯೇ ಆಗುತ್ತಿವೆ. ಈಗಾಗಲೇ 25 ಕೋಟಿ ರೂ. ಅನುದಾನವನ್ನು ಎಲ್ಲಾ ಕ್ಷೇತ್ರಕ್ಕೂ ಕೊಟ್ಟಿದಾರೆ. ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಯಾವ ಕಾರ್ಯಗಳೂ ನಿಂತಿಲ್ಲ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಂ ಬದಲಾವಣೆ ವರಿಷ್ಠರಿಗೆ ಬಿಟ್ಟಿದ್ದು. ಹೈಕಮಾಂಡ್ ಸಿಎಂ ಬದಲಾವಣೆಗೆ ಸೂಚನೆ ಕೊಟ್ಟಿಲ್ಲ. ಸಣ್ಣ-ಪುಟ್ಟ ಭಿನ್ನಾಭಿಪ್ರಾಯದಿಂದ ಕೆಲ ಶಾಸಕರು ಮಾತಾಡಿರಬಹುದು. ಅದು ಅವರ ವೈಯಕ್ತಿಕ ವಿಚಾರ ಎಂದರು.