ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರಿಗೆ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಧನ್ಯವಾದ ಹೇಳಿದ್ದಾರೆ.
ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಒಟ್ಟು 7 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 6 ವಿಕೆಟ್ ಪಡೆದ ಸಿರಾಜ್, ದ್ವಿತೀಯ ಇನಿಂಗ್ಸ್ನಲ್ಲಿ ಮೊದಲ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು.
ಟೀಮ್ ಇಂಡಿಯಾದ ಈ ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿರಾಟ್ ಕೊಹ್ಲಿ ಭಾರತ ತಂಡಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದನೆ ಸಲ್ಲಿಸಿದ್ದರು.”ಎಡ್ಜ್‌ಬಾಸ್ಟನ್‌ನಲ್ಲಿ ಭಾರತಕ್ಕೆ ಅದ್ಭುತ ಗೆಲುವು. ನಿರ್ಭೀತರಾಗಿ ಇಂಗ್ಲೆಂಡ್ ತಂಡವನ್ನು ಸೋಲಿನತ್ತ ತಳ್ಳುತ್ತಲೇ ಇದ್ದರು. ಶುಭ್‌ಮನ್ ಬ್ಯಾಟಿಂಗ್ ಮತ್ತು ಫೀಲ್ಡ್‌ನಲ್ಲಿ ಅದ್ಭುತ ನಾಯಕತ್ವ ವಹಿಸಿದರು. ಅಲ್ಲದೆ ಎಲ್ಲರ ಪ್ರಭಾವಶಾಲಿ ಪ್ರದರ್ಶನ ನೀಡಿದರು. ಅದರಲ್ಲೂ ಈ ಪಿಚ್‌ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ ಎಂದು ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ KSRTC ಬಸ್: ತಪ್ಪಿದ ದುರಂತ!
ಇತ್ತ ತನ್ನ ಮಾಜಿ ಟೆಸ್ಟ್ ನಾಯಕನಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದಂತೆ ಮೊಹಮ್ಮದ್ ಸಿರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಥ್ಯಾಂಕ್ಯೂ ಭಯ್ಯಾ ಎಂದು ರಿಪ್ಲೈ ಮಾಡುವ ಮೂಲಕ ಸಿರಾಜ್ ಸಂತಸ ಹಂಚಿಕೊಂಡಿದ್ದಾರೆ. ಇದೀಗ ಮೊಹಮ್ಮದ್ ಸಿರಾಜ್ ಹಾಗೂ ವಿರಾಟ್ ಕೊಹ್ಲಿಯ ಪೋಸ್ಟ್ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.