ಹಾಸನ: ಇತ್ತೀಚಿನ ದಿನಗಳಲ್ಲಿ ಯುವ ಜನರಲ್ಲಿ ಹೃದಯಾಘಾತದ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ. ಅದರಲ್ಲೂ ಹಾಸನದಲ್ಲಿ ಹೃದಯಾಘಾತದ ಪ್ರಕರಣಗಳನ್ನು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದೀಗ ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಮರಣ ಮೃದಂಗ ಮುಂದುವರೆದಿದ್ದು, ಹಾಸನದಲ್ಲಿ ಹೃದಯಾಘಾತದಿಂದ ಇಂದು ಮೂವರು ಮೃತರಾಗಿದ್ದು, ಈ ಮೂಲಕ ಹೃದಯಾಘಾತಕ್ಕೆ ಬಲಿಯಾದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಸಕಲೇಶಪುರ ತಾಲೂಕಿನ ಬೆಳಗೋಡು ಹೋಬಳಿ ಮೆಣಸಮಕ್ಕಿ ಗ್ರಾಮದ ಲಕ್ಶ್ಮಣ (52) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹಿಂದಿರುಗಿದ್ದ ಲಕ್ಷ್ಮಣ ಅವರಿಗೆ ಎದೆನೋವು ಕಾಣಿಸಿದೆ. ಕೂಡಲೇ ಮನೆಯವರು ಆ್ಯಂಬುಲೆನ್ಸ್ ಕರೆ ಮಾಡಿದ್ದಾರೆ. ಆದರೆ ಆ್ಯಂಬುಲೆನ್ಸ್ ಬರೋವಷ್ಟ್ರಲ್ಲಿ ಲಕ್ಷಣ್ ಪ್ರಾಣಪಕ್ಷಿ ಹಾರಿಹೋಗಿದೆ.
ಇನ್ನೊಂದೆಡೆ ಹಾಸನ ನಗರದ ಅಮೀರ್ ಮೊಹಲ್ಲಾದಲ್ಲಿ 53 ವರ್ಷದ ಮುಹೀತ್ ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿದ್ದಾಗ ಮುಹೀತ್ಗೆ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಎದೆನೋವು ಹೆಚ್ಚಾಗಿ ಮುಹೀತ್ ಸಾವನ್ನಪ್ಪಿದ್ದಾರೆ.
ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದ ಸುರೇಶ್(52) ಹಠಾತ್ ಸಾವನ್ನಪ್ಪಿದ್ದು, ಇಂದು ಬೆಳಗ್ಗೆ ಸುರೇಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೆ ಅರಸೀಕೆರೆ ತಾಲೂಕಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟ್ರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಸದ್ಯ ಹಾಸನದಲ್ಲಿ ಹೃದಯಾಘಾತದಿಂದಾಗಿ 46 ದಿನಗಳಲ್ಲಿ 40 ಸಾವಾಗಿದ್ದು, ಈ ಹಠಾತ್ ಸಾವುಗಳು ಜಿಲ್ಲೆಯ ಜನರನ್ನು ಹೆಚ್ಚಿ ಬೀಳಿಸುತ್ತಿವೆ.