ಶಿವಮೊಗ್ಗ: ರಾಜ್ಯದಲ್ಲಿ ಬೇಲಿನೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಿ ಟಿಪ್ಪು ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಯಾವ ರೀತಿಯ ಘಟನೆ ನಡೆಯುತ್ತಿದೆ.
ಇದು ಒಂದು ರೀತಿಯ ಷಡ್ಯಂತ್ರ. ಇದಕ್ಕೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳದೇ ಇರುವ ಪರಿಣಾಮ ದೇಶದ್ರೋಹಿಗಳಿಗೂ ಸಹ ಧೈರ್ಯ ಬರ್ತಾ ಇದೆ. ಯಾರೇ ಏನ್ ಮಾಡಿದ್ರು ಸಹ ರಾಜ್ಯ ಸರ್ಕಾರ ನಮಗೆ ಬೆಂಬಲ ನೀಡ್ತಾ ಇದೆ. ನಮ್ಮನ್ನು ಯಾರೂ ಅಲ್ಲಾಡಿಸಲು ಆಗ್ತಾ ಇಲ್ಲ.
ಈ ಹಣ್ಣಿಗೆ ಹೃದಯಾಘಾತ ತಡೆಯೋ ಶಕ್ತಿ ಇದೆ.. ವಾರದಲ್ಲಿ ಒಮ್ಮೆಯಾದರೂ ತಪ್ಪದೇ ಸೇವಿಸಿ!
ಯಾವುದೇ ಶಿಕ್ಷೆ ಕೊಡಿಸಲು ಆಗುವುದಿಲ್ಲ. ಬೇಲಿನೇ ಎದ್ದು ಹೊಲ ಮೇಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ, ಇಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಸಿಎಂ ಮತ್ತು ಗೃಹ ಸಚಿವರು ಎಲ್ಲಿದ್ದಾರೆ ಎಂದು ಜನ ಪ್ರಶ್ನೆ ಮಾಡ್ತಾ ಇದ್ದಾರೆ ಎಂದರು.