ಲುಧಿಯಾನಾ:- ಪಂಜಾಬ್ನ ಲುಧಿಯಾನಾದಲ್ಲಿ ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಶವ ಪತ್ತೆಯಾಗಿರುವ ಘಟನೆ ಜರುಗಿದೆ
ಇಂದಿನಿಂದ ಜುಲೈ 3 ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಇಲ್ಲೆಲ್ಲಾ ರೆಡ್, ಯೆಲ್ಲೋ ಅಲರ್ಟ್ ಘೋಷಣೆ!
ವ್ಯಕ್ತಿಯ ಕುತ್ತಿಗೆ ಮತ್ತು ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು.ಸುತ್ತಮುತ್ತಲ ಪ್ರದೇಶದಲ್ಲಿ ಕೆಟ್ಟ ವಾಸನೆ ಹರಡಲು ಪ್ರಾರಂಭಿಸಿದ ನಂತರ ಸ್ಥಳೀಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಎಸ್ಎಚ್ಒ ಕುಲ್ವಂತ್ ಕೌರ್ ಮಾಹಿತಿ ನೀಡಿದ್ದು, ಮೃತ ವ್ಯಕ್ತಿ ವಲಸೆ ಕಾರ್ಮಿಕನಂತೆ ಕಾಣುತ್ತಿದ್ದಾರೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿಲ್ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ. ದೇಹದಲ್ಲಿ ಯಾವುದೇ ಗಾಯದ ಗುರುತುಗಳಿಲ್ಲ, ಆದರೆ ದೇಹ ಸಂಪೂರ್ಣವಾಗಿ ಕೊಳೆತುಹೋಗಿದೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಸಾವಿನ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಅವರು ಹೇಳಿದರು.
ತನಿಖಾ ಅಧಿಕಾರಿಗಳು ಲುಧಿಯಾನದಲ್ಲಿರುವ 42 ಡ್ರಮ್ ತಯಾರಿಕಾ ಘಟಕಗಳ ಪಟ್ಟಿಯನ್ನು ಸಂಗ್ರಹಿಸಿದ್ದಾರೆ. ಮೃತದೇಹ ಪತ್ತೆಯಾಗಿರುವ ಡ್ರಮ್ ಹೊಸದಾಗಿದ್ದು, ಇದು ಪೂರ್ವಯೋಜಿತ ಕೊಲೆಯ ಸಾಧ್ಯತೆಯನ್ನು ಸೂಚಿಸುತ್ತದೆ. ಕೊಲೆಗೆ ಮುನ್ನ ಡ್ರಮ್ ಅನ್ನು ಹೊಸದಾಗಿ ಖರೀದಿಸಲಾಗಿದೆ ಎಂಬ ಅನುಮಾನವಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.