ಗದಗ: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರ. ಆದ್ರೆ ಇದೀಗ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಸರ್ಕಾರಿ ಶಾಲೆಯ ಆವರಣದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದಿದೆ. ರಾಕೇಶ್ ಮಣ್ಣೊಡ್ಡರ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,
ಬಿಯರ್ ಕುಡಿದರೆ ಕಿಡ್ನಿ ಸ್ಟೋನ್ ಆಗುತ್ತಾ? ಎಣ್ಣೆ ಪ್ರಿಯರು ನೋಡಲೇಬೇಕಾದ ಸ್ಟೋರಿ!
ರಾಜ್ಯಮಟ್ಟದ ಕಬ್ಬಡ್ಡಿ ಆಟಗಾರನಾಗಿದ್ದ ರಾಕೇಶ್ ನರೇಗಲ್ ಪಟ್ಟಣದ ಅನ್ನದಾನೇಶ್ವರ ಹೈಸ್ಕೂಲ್ ನಲ್ಲಿ ನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಉತ್ತಮ ಆಟದಿಂದ ಸಾಕಷ್ಟು ಪ್ರಶಸ್ತಿ ಪಡೆದಿದ್ದ ರಾಕೇಶ್, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದನು. ಇದರಿಂದ ಮನನೊದು ಸರ್ಕಾರಿ ಶಾಲೆಯ ಆವರಣದ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೆಳಿಗ್ಗೆ ವಾಕಿಂಗ್ ಬಂದವರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಇನ್ನೂ ಘಟನಾ ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.