ಕಾರವಾರ:- ಭಟ್ಕಳ ತಾಲೂಕಿನ ಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ.
ನಿಂಬೆ ಸಿಪ್ಪೆ ಬಿಸಾಕೋ ಮುನ್ನ ಈ ಸ್ಟೋರಿ ನೋಡಿ: ಇದರಿಂದಾಗುವ ಲಾಭ ಎಷ್ಟು ಗೊತ್ತಾ?
ಇಲ್ಲಿಗೆ ಬರುವ ಪ್ರವಾಸಿಗರು ಕಡಲ ತೀರಕ್ಕೆ ಭೇಟಿ ನೀಡಿದ ನಂತರ ಶಿವನ ದೇವಾಲಯಕ್ಕೂ ಭೇಟಿ ಕೊಡುತ್ತಾರೆ. ಈ ವೇಳೆ ಪುರುಷರು ಚಡ್ಡಿ, ಬನಿಯನ್ನಲ್ಲಿ ಬಂದರೆ, ಮಹಿಳೆಯರು ಸಹ ಧಾರ್ಮಿಕ ಸ್ಥಳದಲ್ಲಿ ಧರಿಸಬೇಕಾದ ವಸ್ತ್ರ ಧರಿಸದೇ ಆಕ್ಷೇಪಾರ್ಹ ರೀತಿಯಲ್ಲಿ ದೇವರ ದರ್ಶನಕ್ಕೆ ಬರುತಿದ್ದರು. ಆಸ್ತಿಕ ಭಕ್ತರು ಈ ಬಗ್ಗೆ ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿ ತರುವಂತೆ ಮನವಿ ಮಾಡಿದ್ದರು.
ಈಗ ಆಡಳಿತ ಮಂಡಳಿ ಈ ಬಗ್ಗೆ ನಿರ್ಧಾರ ಕೈಗೊಂಡಿದ್ದು, ಪುರುಷರಿಗೆ ಪಂಚೆ ಮತ್ತು ಮಹಿಳೆಯರಿಗೆ ಸೀರೆ, ಚೂಡಿದಾರ ಧರಿಸಿದರೆ ಮಾತ್ರ ದೇವಾಲಯಕ್ಕೆ ಪ್ರವೇಶ ಕಲ್ಪಿಸಲಿದೆ. ದೇವಾಲಯದ ಎದುರುಭಾಗ ಸೂಚನ ಫಲಕ ಹಾಕಲಾಗಿದ್ದು, ಯಾವ ವಸ್ತ್ರ ಧರಿಸಬೇಕು ಎಂದು ಫಲಕದಲ್ಲಿ ನಮೂದಿಸಲಾಗಿದೆ.