ಚೆನ್ನೈ:ತಮಿಳುನಾಡಿನ ಮೈಲಾಡುತುರೈನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ, ಬಿರುಗಾಳಿಯಿಂದಾಗಿ ವೇದಿಕೆಯ ಬಳಿಯಿದ್ದ ಓವರ್ಹೆಡ್ ಸ್ಪಾಟ್ಲೈಟ್ಗಳು ಕುಸಿದು ಬಿದ್ದಿದ್ದು, ಡಿಎಂಕೆ ಸಂಸದ ಎ ರಾಜಾ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಪಕ್ಷದ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ನಿಂತು ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ.
https://x.com/PTI_News/status/1919246782082769209?ref_src=twsrc%5Etfw%7Ctwcamp%5Etweetembed%7Ctwterm%5E1919246782082769209%7Ctwgr%5E629885663d84c5b6d0b8069d1154227cbcf91297%7Ctwcon%5Es1_&ref_url=https%3A%2F%2Fpublictv.in%2Fdmk-mp-a-raja-narrowly-escapes-injury-as-stage-lights-collapse-during-public-meeting-in-mayiladuthurai-tamil-nadu%2F
ಫೋಕಸ್ ದೀಪಗಳು ಬೀಳುವುದನ್ನು ನೋಡಿದ್ದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್ಹೆಡ್ ಫೋಕಸ್ ದೀಪಗಳು ಕುಸಿದು ಡಯಾಜ್ ಮೇಲೆ ಬೀಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.