ದಾಂಡೇಲಿ: ಉಚಿತ ಕೊಡುಗೆ ಎಂಬುದು ಅಪಾಯಕಾರಿ ಎಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಶಾಸಕರಾದ ಆರ್.ವಿ.ದೇಶಪಾಂಡೆ ವಿರೋಧ ವ್ಯಕ್ತಪೆಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು ಮತ್ತು ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಈ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕೆಂಬ ಬೇಡಿಕೆ ಇತ್ತು. ಎಲ್ಲವನ್ನೂ ಉಚಿತವಾಗಿ ನೀಡಿದರೆ ನಾವು ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.