ಹುಬ್ಬಳ್ಳಿ:- ಹುಡುಗಿ ವಿಚಾರಕ್ಕೆ ಇಬ್ಬರು ಯುವಕರಿಗೆ ನಾಲ್ಕೈದು ಯುವಕರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ಜರುಗಿದೆ.
ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ!
ನನ್ನ ಹುಡುಗಿಗೆ ಕಾಲ್ ಮಾಡತ್ತಿಯಾ ಅಂತ ಓರ್ವ ಯುವಕನಿಗೆ ಥಳಿಸಿದ್ದು, ಜೊತೆಯಲ್ಲಿ ಆತನ ಸ್ನೇಹಿತನಿಗೂ ಸಿನಿಮೀಯ ರೀತಿಯಲ್ಲಿ ಪುಂಡರ ಗ್ಯಾಂಗ್ ಹಲ್ಲೆ ನಡೆಸಿದೆ. ಯುವಕರಿಗೆ ಥಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಹೆಸರು ಪ್ರಸ್ತಾಪ ಆಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಿದ್ದಾರೆ.