ದಕ್ಷಿಣ ಕನ್ನಡ : ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾ ಸಂಘವು ಎ.3ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದೆ.
ಬೆಂ-ಮೈ ಎಕ್ಸ್ಪ್ರೆಸ್ ಹೈವೇ ಸರ್ವೀಸ್ ರಸ್ತೆಯಲ್ಲಿ ಅಪಘಾತ ; ಮೂವರ ಸಾವು
ಈ ಕುರಿತು ಮಂಗಳೂರು ನಗರದ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸಂಘದ ದ.ಕ. ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರನ್ನು ನೇರಪಾವತಿ ವ್ಯವಸ್ಥೆಯಡಿ ತರಲಾಗಿದೆ ಎಂದರು. ಪಾಲಿಕೆಯ 462 ಪೌರಕಾರ್ಮಿಕರು, ಕಸ ಸಾಗಣೆ ವಾಹನಗಳ 157 ಚಾಲಕರು, 127 ಲೋಡರ್ಗಳು ಹಾಗೂ ಜಿಲ್ಲೆಯ ಇತರ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಸೇರಿ ನಮ್ಮ ಜಿಲ್ಲೆಯಲ್ಲಿ 671 ಮಂದಿಯ ಕೆಲಸ ಖಾಯಂಗೊಳ್ಳಬೇಕಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶುಭ ಸುದ್ದಿ ನೀಡುವ ನಿರೀಕ್ಷೆ ಇದೆ ಎಂದರು. ದೇಶದ ವಿವಿಧ ಭಾಗಗಳ ಸುಮಾರು 60 ಸಾವಿರ ಪೌರಕಾರ್ಮಿಕರು ಭಾಗವಹಿಸುವರು. ನಮ್ಮ ಜಿಲ್ಲೆಯಿಂದ 400 ಮಂದಿ ಭಾಗವಹಿಸಲಿದ್ದೇವೆ ಎಂದು ತಿಳಿಸಿದರು.