ಕೊಪ್ಪಳ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಈ ಯೋಜನೆಯ ಹಣ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ.
ಅದರಂತೆ ಇದೀಗ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ.ಹೌದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ವೃದ್ಧೆ ಹನುಮವ್ವ ಎಂಬುವರು ಗೃಹ ಲಕ್ಷ್ಮಿ ಹಣ ಕೂಡಿಟ್ಟು,
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ತಮ್ಮ ಜಮೀನಿನಲ್ಲಿ ಈ ಹಣದಲ್ಲಿ ಬೋರವೆಲ್ ಕೊರೆಸಿದ್ದಾರೆ. ಬೊರವೆಲ್ಗೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದ್ದಾರೆ. ಬೋರವೆಲ್ನಲ್ಲಿ ಮೂರು ಇಂಚಿನಷ್ಟು ನೀರು ಚಿಮ್ಮಿದೆ. ವೃದ್ಧೆ ಹನುಮವ್ವ ತಳವಾರ ಸಂತಸಗೊಂಡಿದ್ದಾರೆ.