ಕೋಲಾರ: ಬೈಕ್ ಗೆ ಪೊಲೀಸ್ ಬುಲೇರೋ ವಾಹನ ಡಿಕ್ಕಿಯಾಗಿ ಗಾಯಗೊಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕಿನ ಬಡಮಾಕನಹಳ್ಳಿಯ ನಾರಾಯಣಸ್ವಾಮಿ ಸಾವನ್ನಪ್ಪಿದ ದುರ್ಧೈವಿಯಾಗಿದ್ದು,
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕಾಂತರಾಜ್ ಸರ್ಕಲ್ನಲ್ಲಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸಿಪಿಐ ಶಂಕರಾಚಾರಿ ಇದ್ದ ವಾಹನ ಬೈಕ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
Red Blood Cells: ದೇಹದಲ್ಲಿ ಕೆಂಪು ರಕ್ತ ಕಣಗಳ ಸಂಖ್ಯೆ ಹೆಚ್ಚಿಸಲು ಈ ಆಹಾರ ಪದಾರ್ಥ ಸೇವಿಸಿ!
ಗಂಭೀರವಾಗಿ ಗಾಯಗೊಂಡಿದ್ದ ನಾರಾಯಣಸ್ವಾಮಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.