ರಾಮನಗರ: ಬಿಡದಿ ಹೋಬಳಿ ಭದ್ರಾಪುರ ಹಕ್ಕಿ ಪಿಕ್ಕಿ ಕಾಲೋನಿ ಬಳಿ ಅಪ್ರಾಪ್ತ ಬಾಲಕಿಯನ್ನು ಕೊಲೆಗೈದು ದುಷ್ಕರ್ಮಿಗಳು ಮೃತದೇಹವನ್ನು ಎಸೆದು ಪರಾರಿಯಾಗಿರುವ ಘಟನೆ ನಡೆದಿದೆ. ಭದ್ರಾಪುರ ಗ್ರಾಮದ ಮಾತು ಬಾರದ ಬಾಲಕಿ (14) ಮೃತ ದುರ್ಧೈವಿಯಾಗಿದ್ದು,
ಕಳೆದ ರಾತ್ರಿ ಆಟೋ ರಿಕ್ಷಾದಲ್ಲಿ ಬಂದ ಪುಂಡರು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿ ಗ್ರಾಮದ ಬಳಿ ಹಳ್ಳದಲ್ಲಿ ಮೃತದೇಹವನ್ನು ಎಸೆದು ಪರಾರಿಯಾಗಿದ್ದಾರೆ. ಇನ್ನೂ ಘಟನೆ ಸಂಬಂಧ ಬಿಡದಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.
Benefits of Peanut: ಬಡವರ ಬಾದಾಮಿ ಕಡಲೆ ಕಾಯಿಯಲ್ಲಿದೆ ಆರೋಗ್ಯದ ಗುಟ್ಟು..! ತಿಳಿದ್ರೆ ಶಾಕ್ ಆಗ್ತೀರಾ..
ಇನ್ನೂ ಕುಟುಂಬಸ್ಥರು ಮಗಳ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಪೊಲೀಸರು, ಅಧಿಕಾರಿಗಳು, ರಾಜಕಾರಣಿಗಳು, ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಮಾಧ್ಯಮದವರು ಸೇರಿದಂತೆ ಯಾರೇ ಊರಿಗೆ ಹೋದರೂ, ‘ನಮ್ಮೂರ ಹುಡುಗಿ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬದವರು ಹಾಗೂ ಊರಿನವರು ಅಂಗಲಾಚುತ್ತಿದ್ದಾರೆ.