ಬೆಂಗಳೂರು: ಭಾರತ ಕಂಡ ಹಿರಿಯ ವಿಜ್ಞಾನಿ, ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೃಷ್ಣಸ್ವಾಮಿ ಕಸ್ತೂರಿರಂಗನ್ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಎಕ್ಸ್ನಲ್ಲಿ ಕಸ್ತೂರಿರಂಗನ್ ಅವರೊಂದಿಗಿರುವ ಫೋಟೋ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು,
“ಭಾರತದ ವೈಜ್ಞಾನಿಕ ಮತ್ತು ಶೈಕ್ಷಣಿಕ ಪ್ರಯಾಣದಲ್ಲಿ ಅತ್ಯುನ್ನತ ವ್ಯಕ್ತಿಯಾಗಿದ್ದ ಡಾ.ಕೆ.ಕಸ್ತೂರಿರಂಗನ್ ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ರಾಷ್ಟ್ರಕ್ಕೆ ನಿಸ್ವಾರ್ಥ ಕೊಡುಗೆ ಸದಾ ಸ್ಮರಣೀಯ” ಎಂದು ನೆನಪಿಸಿಕೊಂಡಿದ್ದಾರೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಇಸ್ರೋದಲ್ಲಿ ತಮ್ಮ ಶ್ರದ್ಧೆಯ ಸೇವೆಯಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ದವರು ಕಸ್ತೂರಿರಂಗನ್. ಇದು ನಮ್ಮ ದೇಶಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟಿದೆ. ಮಹತ್ವಾಕಾಂಕ್ಷೆಯ ಉಪಗ್ರಹ ಉಡಾವಣೆಗಳು ಹಾಗೂ ನಾವೀನ್ಯತೆಗೆ ಅವರ ನಾಯಕತ್ವ ಸಾಕ್ಷಿಯಾಗಿದೆ” ಎಂದು ಅವರು ಬರೆದುಕೊಂಡಿದ್ದಾರೆ.