ಬೆಂಗಳೂರು:- ಕರ್ನಾಟಕದಲ್ಲಿ ಒಂದು ವಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.