ತುಮಕೂರು:- ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನಿಗೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ಜರುಗಿದೆ. ನಿನ್ನೆ ಸಂಜೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕ್ಷುಲ್ಲಕ ಕಾರಣಕ್ಕೆ ಯುವಕರ ತಂಡ, ಗಲಾಟೆ ಮಾಡಿಕೊಂಡಿದೆ. ಈ ವೇಳೆ ಏಕಾಏಕಿ ಮಚ್ಚು ಬೀಸಿದೆ. ಯುವಕ ಮಚ್ಚು ಬೀಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉದ್ದೇಶ ಪೂರ್ವಕವಾಗಿ ಮಚ್ಚು ತಂದು ಆರೋಪಿ ಗಾಡಿಯಲ್ಲಿಟ್ಟಿದ್ದ.
ಸದ್ಯ ಶಿರಾ ನಗರ ಠಾಣೆಯ ಪೊಲೀಸರಿಂದ ಇಬ್ಬರನ್ನು ಬಂಧಿಸಲಾಗಿದೆ. ಆನಂದ್ ಮತ್ತು ಸಂತೋಷ್ ಬಂಧಿತ ಆರೋಪಿಗಳು. ಮಂಜುನಾಥ್ ಎಂಬುವವನಿಗೆ ಗಭೀರಗಾಯವಾಗಿದೆ. ಗಾಯಾಳುವಿಗೆ ಶಿರಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಶಿರಾ ನಗರ ಪೊಲೀಸರ ಭೇಟಿ ಪರಿಶೀಲನೆ ಮಾಡಿದ್ದಾರೆ. ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.