ಬೆಂಗಳೂರು: ಮೆಟ್ರೋ ದಲ್ಲಿ ಪ್ರಯಾಣಿಕರು ಮಾಡುವಂತಹ ಅವಾಂತರಗಳು, ಕಿತಾಪತಿಗಳಿಗೆ ಸಂಬಂಧಪಟ್ಟ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಹೌದು ಮೆಟ್ರೋ ರೈಲು ನಿಗಮವು ಕೋಚ್ ಗಳ ಒಳಗೆ ತಿನ್ನುವುದು ಮತ್ತು ಕುಡಿಯಬಾರದು ಎನ್ನುವ ನಿಯಮವೇ ಇದೆ.
ಆದ್ರೆ ಇದೀಗ ನಮ್ಮ ಮೆಟ್ರೋದಲ್ಲಿ ಮಾದವರ ನಿಲ್ದಾಣದಿಂದ ಮಾಗಡಿ ರಸ್ತೆಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ರೈಲಿನಲ್ಲಿ ಊಟ ಮಾಡಿ ನಿಯಮ ಉಲ್ಲಂಘಿಸಿದ ಹಿನ್ನೆಲೆ, 500ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಹೇಳಿದೆ.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿಯವರೆಗೂ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರು ಊಟ ಮಾಡುತ್ತಿರುವುದನ್ನುಈ ಮಹಿಳೆ ತಾನು ತಂದಿದ್ದ ಬಾಕ್ಸ್‌ನಿಂದ ಊಟ ಮಾಡುತ್ತಿದ್ದ ವಿಡಿಯೋ ಅನ್ನು ಸಹ ಪ್ರಯಣಿಕರೊಬ್ಬರು ವಿಡಿಯೋ ಮಾಡಿದ್ದಾರೆ. ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.
ನಮ್ಮ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ ಈ ಮಹಿಳೆ ಮಾದವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು. ಏಪ್ರಿಲ್ 26 ರಂದು ಘಟನೆ ನಡೆದಿದ್ದು, ಇಂದು 500 ರೂಪಾಯಿ ದಂಡಿ ಕಟ್ಟಿಸಿಕೊಳ್ಳಲಾಗಿದೆ. ಎಂದಿನಂತೆ ಆ ಮಹಿಳೆ ಸೋಮವಾರ ಬೆಳಿಗ್ಗೆ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ಈ ವೇಳೆ ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ.