ಕೋಲಾರ: ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ತೋಟದಲ್ಲಿ ನಡೆದಿದೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಈ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಾತ್ ಆಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ .ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.